ವಿಜಯಪುರ: ಕೋಳಿ ಸಾಗಿಸುವ ವಾಹನ ಹಾಗೂ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ.
ಎರಡು ವಾಹನಗಳ ಸವಾರರು ಗಾಯಗೊಂಡಿದ್ದು, ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೇ, ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿವೆ. ಅಲ್ಲದೇ, ವಾಹನದಲ್ಲಿದ ಕೋಳಿಗಳಿಗೆ ಏನು ಆಗಿಲ್ಲ. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.