ವಿಜಯಪುರ: ಬೃಹತ್ ಲಾರಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ವ್ಯಕ್ತಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿಯಲ್ಲಿ ನಡೆದಿದೆ. ಬೃಹತ್ ಲಾರಿ ಕೆಎ29 ಸಿ1336 ನಂಬರಿನ ಲಾರಿ ಡಿಕ್ಕಿಯಾಗಿರುವ ಪರಿಣಾಮ ಗುರುಪಾದಪ್ಪ ತಾಳಿಕೋಟಿ (65) ಮೃತಪಟ್ಟಿದ್ದಾನೆ. ಇನ್ನೂ ಗಾಯಗೊಂಡಿರುವನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.