ವಿಜಯಪುರ: ರಸ್ತೆ ಪಕ್ಕದಲ್ಲಿ ನಿಂತಿದ್ದ ಖಾಸಗಿ ಬಸ್ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ನಗರದ ಟೋಲ್ ಗೇಟ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.
ಇನ್ನೂ ಮೃತಪಟ್ಟಿರುವ ಪ್ರಯಾಣಿಕನ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಪಿಎಸ್ಐ ಜಿ.ಎಸ್. ಉಪ್ಪಾರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.