ವಿಜಯಪುರ: ಹೂವಿನ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ನಡೆದಿದೆ.
ವಡವಡಗಿ ನಿವಾಸಿ ಸಂಗಣ್ಣ ಹೂಗಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.