ವಿಜಯಪುರ: ವಕೀಲರ ರಕ್ಷಣಾ ಕಾಯ್ದೆ ಅಂಗೀಕಾರಕ್ಕೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ, ತಾಲೂಕು ವಕೀಲರ ಸಂಘದವರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಕೋರ್ಟ್ನಿಂದ ಡಿಸಿ ಕಚೇರಿಯ ವರೆಗೂ ಬೃಹತ್ ಬೈಕ್ ರ್ಯಾಲಿ ನಡೆಸಿದರು. ಅಲ್ಲದೇ, ಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯ್ದೆ ಅಂಗೀಕಾರಕ್ಕೆ ಒತ್ತಾಯಿಸಿದರು. ಪದೇ ಪದೇ ವಕೀಲರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಅದಕ್ಕಾಗಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಈ ವೇಳೆಯಲ್ಲಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.