ವಿಜಯಪುರ: ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿರುವ ಪರಿಣಾಮ ಕಾರು ಜಖಂಗೊಂಡಿರುವ ಘಟನೆ ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ನಡೆದಿದೆ. ಅಥಣಿ ಮಾರ್ಗವಾಗಿ ಸಂಚರಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದೆ. ಇದರಿಂದ ಕಾರಿನ ಹಿಂಬದಿ ಡ್ಯಾಮೇಜ್ ಆಗಿದೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/08/IMG-20230822-WA0235-1024x768.jpg)