ವಿಜಯಪುರ: ಸಂಚರಿಸುವ ರೈಲ್ವೆಗೆ ವ್ಯಕ್ತಿಯೋರ್ವ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ರೈಲ್ವೆ ನಿಲ್ದಾಣದಲ್ಲಿ ಗುರುವಾರ ನಡೆದಿದೆ. ವ್ಯಕ್ತಿಯ ಒಂದು ಕೈ ಕಟ್ ಆಗಿದೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯಪುರ ರೈಲ್ವೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.