ವಿಜಯಪುರ: ದೇಶ, ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್ ವಿವಾದ ಹಿನ್ನೆಲೆ ಇಲ್ಲೊಬ್ಬ ಮುಸ್ಲಿಂ ವ್ಯಕ್ತಿ ಹನುಮ ಮಾಲೆಯನ್ನು ಧರಿಸಿ ಭಾವೈಕ್ಯತೆ ಪ್ರತಿಬಿಂಬ ತೋರಿಸಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ನರಸಲಗಿ ಗ್ರಾಮದ ಜಾಫರ್ ಬೆಣ್ಣೆ ಎನ್ನುವರು ಹನುಮಾನ ಮಾಲೆಯನ್ನು ಧರಿಸಿ ಕೇಸರಿ ಬಟ್ಟೆ, ಕೊರಳಲ್ಲಿ ಮಾಲೆಯನ್ನು ಧರಿಸಿ ಹಿಂದು ಮುಸ್ಲಿಂ ಭಾವೈಕ್ಯತೆ ಮೆರೆದಿದ್ದಾರೆ.
ಮಾಲೆ ಧರಿಸಿ ಉತ್ತರ ಕರ್ನಾಟಕದ ಪ್ರಸಿದ್ದ ದೇವಸ್ಥಾನವಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ವ್ರತವನ್ನು ಪೂರ್ಣಗೊಳಿಸುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.