ವಿಜಯಪುರ: ಟ್ರ್ಯಾಕ್ಟರ್ ಹಾಗೂ ಖಾಸಗಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬಸ್ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ರಸ್ತೆಯಲ್ಲಿ ನಡೆದಿದೆ. ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ ಹಿನ್ನೆಲೆ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಗೆ ಎರಡು ವಾಹನಗಳ ಅತಿ ವೇಗವೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.