ವಿಜಯಪುರ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ನಿಡಗುಂದಿ ರಸ್ತೆಯಲ್ಲಿ ನಡೆದಿದೆ.
ಇನ್ನು ಬಸ್ ಪಲ್ಟಿಯಾಗಿರುವ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ, ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.