ವಿಜಯಪುರ: ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿರುವ ಘಟನೆ ಓರ್ವ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಶಿರಗೂರ ಗ್ರಾಮದಲ್ಲಿ ಶನಿವಾರ ನಡೆದಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟಿರುವ ಬೈಕ್ ಸವಾರನ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಘಟನೆಯಲ್ಲಿ ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.