ಕೋಲಾರ: ಬೈಕ್ಗೆ ಲಾರಿ ಡಿಕ್ಕಿಯಾಗಿ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಯಶವಂತಪುರ ಗೇಟ್ ಬಳಿ ನಡೆದಿದೆ. ಮಾನಸ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಪುಷ್ಪ (22) ಮೃತಪಟ್ಟಿರುವ ದುರ್ದೈವಿ. ಇನ್ನು ಸ್ಥಳಕ್ಕೆ ಮಾಲೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.