ಹಾವೇರಿ: ನಾಳೆ ನಡೆಯಲಿರುವ ಯೋಗಥಾನ್ ವಿಶ್ವದಾಖಲೆ ಕಾರ್ಯಕ್ರಮ ಹಿನ್ನಲೆ ರಿಹರ್ಸಲ್ ವೇಳೆ ಸೌಂಡ್ ಬಾಕ್ಸ್ ಬಿದ್ದು 6ನೇ ತರಗತಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ನಡದಿದೆ. ಸಮೀರ ಬಿಜ್ಜೂರ 12 ವರ್ಷ ಗಾಯಗೊಂಡಿರುವ ವಿದ್ಯಾರ್ಥಿ. ಲಯನ್ಸ್ ಇಂಗ್ಲೀಷ ಮಾಧ್ಯಮ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿ ಹೊಟ್ಟೆಯ ಭಾಗದಲ್ಲಿ ಬಾಕ್ಸ್ ಬಿದ್ದು ಪೆಟ್ಟಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ವಿದ್ಯಾರ್ಥಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಗೊಂಡ ವಿದ್ಯಾರ್ಥಿ ಹಾಗೂ ಗಾಯಾಳುವಿನ ಪೋಷಕರಲ್ಲಿ ಹಾವೇರಿ ಜಿಲ್ಲಾಧಿಕಾರಿ ಧೈರ್ಯ ತುಂಬಿದರು. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.