ವಿಜಯಪುರ: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಎರಡು ವಾಹನಗಳು ಜಖಂಗೊಂಡಿರುವ ಘಟನೆ ವಿಜಯಪುರ ನಗರದ ರತ್ನಾ ಪ್ಯಾಲೇಸ್ ಬಳಿ ಗುರುವಾರ ರಾತ್ರಿ ನಡೆದಿದೆ. ಇನ್ನೂ ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅಲ್ಲದೇ, ಸವಾರರಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.