ಧಾರವಾಡ: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಬಿಆರ್ಟಿಎಸ್ ಗ್ರೀಲ್ಗೆ ಡಿಕ್ಕಿಯಾಗಿರುವ ಘಟನೆ ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲೋನಿಯಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರು ಅಪಘಾತ ಆಗಿದೆ. KA 05 AG 8573 ನಂಬರಿನ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ಕಾರಿನ ಮುಂಭಾಗ ಸಂಪೂರ್ಣ ಡ್ಯಾಮೇಜ್ ಆಗಿದೆ. ಧಾರವಾಡ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.