ವಿಜಯಪುರ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆಯ ಎದುರು ನಡೆದಿದೆ. ಇನ್ನೂ ಅಪಘಾತದಲ್ಲಿ ಇಬ್ಬರೂ ಸವಾರರಿಗೂ ಗಂಭೀರ ಗಾಯಗಳು ಆಗಿದ್ದಾವೆ. ಅಪಘಾತಕ್ಕೆ ಅತೀ ವೇಗವೆ ಕಾರಣ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.