ಕಾರವಾರ: ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಮೂವರ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಬಳಿ ನಡೆದಿದೆ. ನೀಲವ್ವ (38), ಗೌರಿಜವ್ವ (43) ಹಾಗೂ ಇನ್ನೋರ್ವ ಪುರುಷ ಸಾವನ್ನಪ್ಪಿದ್ದಾನೆ. ಬಾಗಲಕೋಟೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಏಕಾಏಕಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿಯಾಗಿದೆ. ಇನ್ನೂ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಬಸ್ನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ಪ್ರಾಣಾಪಾಯದಿಂದ ಪರಾಗಿದ್ದಾರೆ. ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ, CPI, PSI ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.