ವಿಜಯಪುರ: ಬಸ್ ಹಾಗೂ ಕ್ರೂಜರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಇಂಗಳಗಿ ಇಂದ ಕಲ್ಬುರ್ಗಿಯ ಹೊರಟ ಕ್ರೂಜರ್ ಹಾಗೂ ಕಲ್ಬುರ್ಗಿಯಿಂದ ವಿಜಯಪುರಕ್ಕೆ ಹೊರಟ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಇನ್ನೂ ಹಲವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಂದಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.