ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ಲಕ್ಷಾಂತರ ಮೌಲ್ಯದ ಕಬ್ಬು ಹಾನಿಯಾಗಿದೆ. ಇನ್ನೂ 22 ಟನ್ ಕಬ್ಬು ತೆಗೆದುಕೊಂಡು ಸಕ್ಕರೆ ಕಾರ್ಖಾನೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದಕ್ಕೆ ಅವೈಜ್ಞಾನಿಕ ರಸ್ತೆ ಕಾಮಗಾರಿ ಎಂದು ರೈತ ಮುಖಂಡ ಹುಸೇನ್ ಮುಲ್ಲಾ ಕಿಡಿಕಾರಿದರು. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.