ವಿಜಯಪುರ: ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಜಿಲ್ಲೆಯ ಚಡಚಣ ತಾಲ್ಲೂಕಿನ ನಂದರಗಿ ಗ್ರಾಮದಲ್ಲಿ ನಡೆದಿದೆ.
ಇನ್ನು ಅಪಘಾತದಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಕಾಶಗೌಡ ಪಾಟೀಲ ತಮ್ಮ ಸ್ವಂತ ವಾಹನದಲ್ಲಿ ನಂದರಗಿಯಿಂದ ವಿಜಯಪುರ ನಗರದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಚಡಚಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.