ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.ಇನ್ನು ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ
ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರದಲ್ಲಿ ಹಾಡುಹಗಲೇ ಯುವಕನ ಮೇಲೆ ಹಲ್ಲೆ
