ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಮನಗೂಳಿ ಬೈಪಾಸ್ ಬಳಿ ನಡೆದಿದೆ.
ಇನ್ನು ಗಾಯಗೊಂಡಿರುವ ಯುವಕನ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಗಾಯಗೊಂಡಿರುವ ಯುವಕನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.