ವಿಜಯಪುರ: ನೀರು ಕುಡಿಯಲು ಹೋದ ಯುವಕ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ನಿವಾಸಿ ಪವಾಡೆಪ್ಪ ಲಕ್ಷ್ಮಣ ಬಿದರಿ ಮೃತ ದುರ್ದೈವಿ. ಕುರಿ ಮೇಯಿಸಲು ಹೋದಾಗ ನೀರು ಕುಡಿಬೇಕೆಂದು ಕೃಷಿ ಹೊಂಡಕ್ಕೆ ಹೋದಾಗ ಕಾಲು ಜಾರಿ ಬಿದ್ದು ಅಸುನೀಗಿದ್ದಾನೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.