ಕೈ ಸರ್ಕಾರದ ವಿರುದ್ಧ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಕಿಡಿ

Karnataka 1 News
ಕೈ ಸರ್ಕಾರದ ವಿರುದ್ಧ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಕಿಡಿ

ವಿಜಯಪುರ: ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು, ಪಿಪಿಪಿ (ಪಬ್ಲಿಕ್, ಪ್ರೈವೇಟ್, ಪಾರ್ಟ್‌ನರ್‌ಶಿಪ್) ಮಾದರಿಯಲ್ಲಿ ವೈದ್ಯಕೀಯ ಕಾಲೇಜನ್ನು ಕೈ ಬಿಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿ ಹೋರಾಟ ಮಾಡಲಾಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬೇಕೇ ಬೇಕು ಸರಕಾರಿ ಮೆಡಿಕಲ್ ಕಾಲೇಜು ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು, ಜಿಲ್ಲಾಧಿಕಾರಿಗಳಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಹೋರಾಟಗಾರರನ್ನು ತಡೆದರು ಆ ವೇಳೆ ಪೊಲೀಸರು ಹಾಗೂ ಎಬಿವಿಪಿ ಕಾರ್ಯಕರೊಂದಿಗೆ ವಾಗ್ವಾನ ನಡೆಯಿತು, ಪೊಲೀಸರು ಎಬಿವಿಪಿ ಕಾರ್ಯಕರ್ತರನ್ನೂ ಬಂಧನ ಮಾಡಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸರಕಾರ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಲು ಹೊರಟಿರುದನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಈಗಾಗಲೇ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಲು ಬೇಕಿರುವ ಎಲ್ಲ ಮೂಲಭೂತ ಸೌಲಭ್ಯಗಳು ಇದ್ದರೂ ಸಹಿತ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜಿನ ಸ್ಪಾಪನೆಗೆ ಮುಂದಾಗಿರುವಕ್ಕೆ ಕಾರಣ ಏನುಎಂಬುವುದರ ಕುರಿತು ಸ್ಪಷ್ಟನೆ ಇಲ್ಲದಂತಾಗಿದೆ, ಈಗಾಗಲೇ ನಗರದಲ್ಲಿ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳು ಇದ್ದು ವಿಜಯಪುರ ನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿದು ವಿಜಯಪುರ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರ ಮಕ್ಕಳು ವೈದ್ಯರಾಗಬೇಕು ಎಂಬ ಕನಸನ್ನು ಇಟ್ಟುಕೊಂಡು ವಿದ್ಯಾಬ್ಯಾಸ ಮಾಡುತ್ತಿರುತ್ತಾರೆ ಆದರೆ ಲಕ್ಷಾಂತರ ರೂಪಾಯಿ ಹಣವನ್ನು ನೀಡಿ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಓದಲು ಹಣವನ್ನು ನೀಡುವುದಕ್ಕೆ ಆಗದೆ ಇರುವ ಕಾರಣ ಸಾವಿರಾರು ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗುತ್ತಿಲ್ಲ, ಶಿಕ್ಷಣ ಎನ್ನುವುದು ಕೇವಲ ಹಣವಂತರ ಸ್ವತಲ್ಲ, ಅದು ಸರ್ವರಿಗೂ ಸಿಗುವಂತಾಗಬೇಕು, ಅದನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿ ಸರಕಾರಗಳದ್ದು ಆ ಕಾರ್ಯಗಳನ್ನು ಸರಕಾರಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಆಗ್ರಹ ವ್ಯಕ್ತಪಡಿಸಿದರು. ಎಬಿವಿಪಿಯ ಮುಖಂಡರಾದ ಹರ್ಷ ನಾಯಕ ಮಾತನಾಡಿ ವೈದ್ಯೋ ನಾರಾಯಣೋ ಹರಿ” ವೈದ್ಯನು ಸಾಕ್ಷಾತ್ ನಾರಾಯಣವೆಂದೂ, ರಕ್ಷಕನೆಂದೂ, ದೇವರ ಸಮಾನನೆಂದೂ ಅರ್ಥ. ಒಬ್ಬ ವೈದ್ಯನು ರೋಗಿಗಳ ವಿಷಯದಲ್ಲಿ ತನ್ನ ಪರಧಿಯಲ್ಲಿ ಸರ್ವಕಾಲ ಸರ್ವಾವಸ್ಥೆಯಲ್ಲೂ ರಕ್ಷಕನ ಪಾತ್ರವನ್ನು ಪೋಷಿಸುತ್ತಾನೆ ಆದ್ದರಿಂದ, ” ದೇವರ ಸಮಾನನು” ಎಂದು ಅರ್ಥ ಇಂತಹ ವೈದ್ಯರಾಗಬೇಕು ಸೇವೆ ಸಲ್ಲಿಸಬೇಕು ಎನ್ನುವ ಕನಸನ್ನು ಸಾವಿರಾರು ವಿದ್ಯಾರ್ಥಿಗಳು ಇಟ್ಟುಕೊಂಡಿರುತ್ತಾರೆ ಅವರಿಗೆ ಸರಕಾರ ಅನ್ಯಾಯ ಮಾಡುತ್ತಿದೆ ಎಂದರು. ಪ್ರತಿಭಟನೆಯಲ್ಲಿ ಎಬಿವಿಪಿಯ ಮುಖಂಡರಾದ ಸುಜ್ಞಾತಾ ಕುಲಕರ್ಣಿ, ಮಲ್ಲಿಕಾರ್ಜುನ ಮಾಳಿ, ಮಂಜುನಾಥ ಹಳ್ಳಿ ಸಂದೀಪ ಅರಳಗುಂಡಿ, ಶಶಿಕಾಂತ ರಾಕ್ಲೆ, ಐಶ್ವರ್ಯ ಆಸಂಗಿ, ಪ್ರವೀಣ ಬಿರಾದಾರ, ಸ್ನೇಹಾ ಹಿರೇಮಠ, ಚೇತನ ಕೋರವಾರ, ಬಸವರಾಜ ಪೂಜಾರಿ, ಬಾಲಾಜಿ ಬಿರಾದಾರ, ಗೌರೀಶ, ಸುನೀಲ ರಾಠೋಡ, ತ್ರಿಶಲಾ ರಾಠೋಡ, ದಾನಮ್ಮ ಹೊಸಮನಿ ಇತರರು ಭಾಗವಹಿಸಿದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";