ವಿಜಯಪುರ: ಬೈಕ್ ಹಾಗೂ ತ್ರಿಚಕ್ರ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಹೊಸ ರಸ್ತೆಯಲ್ಲಿ ರವಿವಾರ ನಡೆದಿದೆ.
ಇನ್ನು ರಸ್ತೆ ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅಲ್ಲದೇ, ಗಾಯಗೊಂಡಿರುವ ಬೈಕ್ ಸವಾರನ ಹೆಸರು ಹಾಗೂ ಮಾಹಿತಿ ತಿಳಿದುಬಂದಿಲ್ಲ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.