ವಿಜಯಪುರ: ಆಕಸ್ಮಿಕವಾಗಿ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಯಲಗೋಡ ಗ್ರಾಮದಲ್ಲಿ ನಡೆದಿದೆ. ಮೊಸೀನಪಟೇಲ ಹುಸೇನಪಟೇಲ ಕಣಮೇಶ್ವರ ಅವರ ತೋಟದ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಸುಮಾರು 150ಕ್ಕೂ ಹೆಚ್ಚು ಹತ್ತಿ ಚೀಲಗಳು ಸುಟ್ಟು ಕರಕಲಾಗಿವೆ. ಮನೆಯಲ್ಲಿರುವ ದನ ಕರುಗಳು ರಕ್ಷಿಸಲು ಹರಸಾಹಸ ಪಟ್ಟರು. ಯಾವುದೇ ಜೀವ ಹಾನಿಯಾಗಿಲ್ಲ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೈತ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದು ಸಾಲ ಮಾಡಿ ಬೆಳೆದ ಹತ್ತಿ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ. ಈ ಕುರಿತು ಸಂಭಂದಪಟ್ಟ ಅಧಿಕಾರಿಗಳು ತನಿಖೆ ನಡೆಸಿ ರೈತನಿಗೆ ಸುಕ್ತ ಪರಿಹಾರ ಒದಗಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.
![](https://karnataka1news.com/wp-content/uploads/2023/06/IMG_20230612_085939-1024x631.jpg)