![](https://karnataka1news.com/wp-content/uploads/2022/12/IMG-20221222-WA0361.jpg)
ವಿಜಯಪುರ: ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ 4 ಎಕರೆ ಕಬ್ಬು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕ ಗರಸಂಗಿ ಗ್ರಾಮದಲ್ಲಿ ನಡೆದಿದೆ. ಕುಮಾರಗೌಡ ಪಾಟೀಲ ಅವರಿಗೆ ಸೇರಿದ 4 ಎಕರೆ ಜಮೀನಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ 6 ಲಕ್ಷ ಮೌಲ್ಯದ ಕಬ್ಬು ನಷ್ಟವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.