ವಿಜಯಪುರ: ವಿದ್ಯುತ್ ಕಂಬದಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಕಬ್ಬು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಜಾಲವಾದ ಗ್ರಾಮದಲ್ಲಿ ನಡೆದಿದೆ. ನಿಜಲಿಂಗಪ್ಪ ಕಾಲಗಗ್ಗರಿ ಎಂಬುವರ ಸೇರಿದ ಎರಡು ಎಕರೆ ಕಬ್ಬು ಹಾನಿಯಾಗಿದೆ. ಅಲ್ಲದೇ, ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದರು. ಇನ್ನೂ ಲಕ್ಷಾಂತರ ಮೌಲ್ಯದ ಕಬ್ಬು ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.