ಹುಬ್ಬಳ್ಳಿ: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಒರ್ವನನ್ನು ಪೋಲಿಸರು ಬಂದಿಸಿದ್ದಾರೆ. ಖಾಸಗಿ ಬಸ್ನಲ್ಲಿ ನಿಲ್ದಾಣದಿಂದ ಮಂಗಳೂರಿಗೆ ಹೊರಟಿದ್ದ ಅವನು ತನ್ನ ಬ್ಯಾಗಗಳಲ್ಲಿ ಯಾವುದೇ ದಾಖಲೆ ಇಲ್ಲದ 1,14,70,000 ನಗದು ಹಣ ವನ್ನು ಸಾಗಿಸುತ್ತಿದ್ದ ವೇಳೆ ಹುಬ್ಬಳ್ಳಿ ಉಪನಗರ ಪೊಲೀಸ ಠಾಣೆಯ ಪೋಲಿಸರು ದಾಳಿಗೈದು ನಗದು ಸಮೇತ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸ್ ಇನ್ಸಪೆಕ್ಟರ್ ಎಮ್.ಎಸ್. ಹೂಗಾರ ತಮ್ಮ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು ಅವನಿಂದ ನಗದು, ಒಂದು ಮೊಬೈಲ್ ಹ್ಯಾಂಡಸೆಟ್ ಜಪ್ತಿಗೈದಿದ್ದಾರೆ. ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ.