ವಿಜಯಪುರ: ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಮಧ್ಯಾಹ್ನ 3ಕ್ಕೆ ದಾಖಲಿಸಲಾಗಿದೆ.