ವಿಜಯಪುರ: ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳಿಗೆ ಅಗ್ನಿ ಸ್ಪರ್ಶ ನೀಡಲಾಯಿತು. ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಮಂಗಳವಾರ ಸಕಲ ವಿಧಿವಿಧಾನಗಳ ಮೂಲಕ ಅಗ್ನಿ ಸ್ಪರ್ಶ ನೀಡಲಾಯಿತು. ಇದಕ್ಕೂ ಮೊದಲು ವಿಜಯಪುರ ನಗರದ ಸೈನಿಕ ಶಾಲೆಯಿಂದ ಜ್ಞಾನಯೋಗಾಶ್ರಮದ ವರೆಗೂ ಅಂತಿಮ ಯಾತ್ರೆ ನಡೆಯಿತು. ಈ ವೇಳೆಯಲ್ಲಿ ಸಹಸ್ರಾರು ಭಕ್ತರು ಅಂತಿಮ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ ಇಲಾಖೆಯಿಂದ ಸೂಕ್ತ ಪೊಲೀಸ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಅಗ್ನಿ ಸ್ಪರ್ಶದ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎಂಬಿ ಪಾಟೀಲ್, ಯಶವಂತರಾಯಗೌಡ ಪಾಟೀಲ, ಸಚಿವರಾದ ಮುರುಗೇಶ ನಿರಾಣಿ, ಸಿಸಿ ಪಾಟೀಲ, ಮಾಜಿ ಡಿಸಿಎಂ ಲಕ್ಷಣ ಸವದಿ, ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಮುಖಂಡ ಬಿವೈ ವಿಜಯೇಂದ್ರ ಸೇರಿದಂತೆ ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.