ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಜನತೆಗೆ ಉಪಯೋಗವಾಗಬೇಕಿದ್ದ ಆ್ಯಂಬುಲೆನ್ಸ್(ambulance) ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲೆ ನಿಲ್ಲುವಂತಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ತೆರಳಲು ಖಾಸಗಿ ವಾಹನಗಳಿಗೆ ದುಪ್ಪಟ್ಟು ಹಣ(Money) ತೆರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಬೀಡಿ, ಪಾರಿಶ್ವಾಡ,ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆ್ಯಂಬುಲೆನ್ಸ್ ಕೊರತೆ ಇದ್ದರೂ ಅಲ್ಲಿಗೆ ಅಂಬ್ಯುಲೆನ್ಸ ವ್ಯವಸ್ಥೆ ಕಲ್ಪಿಸಬೇಕಾಗಿದ್ದ ತಾಲ್ಲೂಕು ವೈಧ್ಯಾಧಿಕಾರಿ ಸಂಜೀವ ನಾಂದ್ರೆ ಅದನ್ನ ಮಾಡದೇ ತಾಲ್ಲೂಕು ಆಸ್ಪತ್ರೆ ಮುಂದೆ ನಿಲ್ಲಿಸಿ ಬೇಜವಾಬ್ದಾರಿ ಕೆಲಸ ಮಾಡುತ್ತಿದ್ದಾರೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಕಾರ್ಯದರ್ಶಿ ವಿಠ್ಠಲ ಹಿಂಡಲಕರ ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಕರೆತರಲು ಸೂಕ್ತ ಆ್ಯಂಬುಲೆನ್ಸ್ ವ್ಯವಸ್ಥೆ ಇಲ್ಲದೆ ಸಮಸ್ಯೆ ಆಗುತ್ತಿದೆ. ಅದಕ್ಕಾಗಿ ತಕ್ಷಣವೇ ಆರೋಗ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.