ವಿಜಯಪುರ: ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬೆನಕೋಟಗಿ ಗ್ರಾಮದ ಬಾವಿಯಲ್ಲಿ ಬಿದ್ದಿದ್ದ ಕೃಷಿ ಕಾರ್ಮಿಕನ್ನು ರಕ್ಷಣೆ ಮಾಡಲಾಗಿದೆ.
ಕೃಷಿ ಕಾರ್ಮಿಕ ಅಶೋಕ್ ರಾಮು ರಾಥೋಡನ್ನು ರಕ್ಷಣೆ ಮಾಡಲಾಗಿದೆ. ಬೆನಕೋಟಗಿ ತೋಟದ ಬಾವಿಯಲ್ಲಿ ಕುಡಿಯಲು ನೀರು ತರಲು ಹೋದಾಗ ಕಾಲು ಜಾರಿ ಬಾವಿಯಲ್ಲಿ ಬಿದ್ದಿದ್ದಾನೆ. ಈ ವಿಷಯ ತಿಳಿದ ತಕ್ಷಣ ಸಿಂದಗಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಮಿಕನ್ನು ರಕ್ಷಣೆ ಮಾಡುವಲ್ಲಿ ಸಫಲರಾಗಿದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.