ವಿಜಯಪುರ: ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆ ಆವರಣದ ಹನುಮಾನ ಮಂದಿರದ ಹಿಂದುಗಡೆ ನಡೆದಿದೆ. ಅಪರಿಚಿತ ವ್ಯಕ್ತಿಯ ಹೆಸರು ಮತ್ತು ವಿಳಾಸ ತಿಳಿದು ಬಂದಿಲ್ಲ. ಆದ್ರೇ, ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗಾಂಧಿಚೌಕ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.