ವಿಜಯಪುರ: ಅನುಮಾಸ್ಪದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಇಂಡಿ ಬೈಪಾಸ್ ಬಳಿ ನಡೆದಿದೆ. ಸುಮಾರು 50-55 ವಯಸ್ಸಿನ ಪುರುಷನ ಶವ ಪತ್ತೆಯಾಗಿದೆ.
ಅಲ್ಲದೇ, ಸಂಪೂರ್ಣವಾಗಿ ಕೊಳೆತಿರುವ ಸ್ಥಿತಿಯಲ್ಲಿ ಶವ ಸಿಕ್ಕಿದೆ. ಇದು ಕೊಲೆಯೋ ಅಥವಾ ಸಹಜ ಸಾವು ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದರ್ಶನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.