ವಿಜಯಪುರ: ಸಂಗ್ರಹಿಸಿ ಇಟ್ಟಿದ ಹುಲ್ಲಿನ ಗುಂಪಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಅಪರಿಚಿತ ವ್ಯಕ್ತಿ ಸಜೀವ ದಹನ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 37 ವರ್ಷದ ಅಪರಿಚಿತ ವ್ಯಕ್ತಿ ಸುಟ್ಟು ಭಸ್ಮವಾಗಿದ್ದಾನೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.