ವಿಜಯಪುರ: ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಹೊರ ಪೊಲೀಸ ಠಾಣಾ ಹತ್ತಿರ ನಡೆದಿದೆ.
ನಾಗನಗೌಡ ಪಾಟೀಲ್ ಎಂಬುವರು ನಡೆಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಆಗಿದೆ. ಆದ್ರೇ, ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ಲಕ್ಷಾಂತರ ಮೌಲ್ಯದ ಕಬ್ಬು ಹಾನಿಯಾಗಿದೆ. ಚಾಲಕ ನಾಗನಗೌಡ ಜಸ್ಟ್ ಪರಾರಿಯಾಗಿದ್ದಾನೆ. ವಿಜಯಪುರ ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.