ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಹಿನ್ನಲೆ ವಿಜಯಪುರ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ರೋಹನ್ ಐನಾಪುರ ರಾಜೀನಾಮೆ ನೀಡಿದ್ದಾರೆ.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಒಳ್ಳೆಯ ಕೆಲಸ ಮಾಡಿದ್ದೇನೆ. ಆದ್ರೂ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತೇನೆ. ಅಲ್ಲದೇ, ಕಳೆದ 10 ವರ್ಷ ಪಕ್ಷಕ್ಕೆ ದುಡಿದ್ದೇನೆ. ನನಗೆ ಪಕ್ಷ ಸಂಘಟನೆಗೆ ಅವಕಾಶ ನೀಡಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಸೇರಿದಂತೆ ಮುಖಂಡರಿಗೆ ನಾನು ಚಿರೃಣಿ ಆಗಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.