ವಿಜಯಪುರ: ಆಮ್ ಆದ್ಮಿ ಪಕ್ಷ ಬಿಜೆಪಿ ಬಿ ಟೀಮ್ ಅಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಮಹಮ್ಮದ್ ಯೂಸುಫ್ ಜಮಾದಾರ್ ಹೇಳಿದರು.
ವಿಜಯಪುರ ನಗರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಯಲ್ಲಿ ಮಾತನಾಡಿದ ಅವರು, ಮಾಜಿ ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ರಜಾಕ್ ಹೊರ್ತಿ ಆಮ್ ಆದ್ಮಿ ಪಕ್ಷದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಖಂಡನೀಯ ಆಗಿದೆ. ನಾವು ಜಿಲ್ಲಾ ಪೊಲೀಸ ಇಲಾಖೆಗೆ ಗೌರವ ನೀಡುತ್ತೇನೆ. ಆದ್ರೇ, ನಾನು ಯಾವುದೇ ಕ್ರೈಂಗಳಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಅಲ್ಲದೇ, ಹೊರ್ತಿ ಅವರು ತಮ್ಮ ರಾಜಕೀಯ ಲಾಭ ಪಡೆಯಲು ಹೇಳಿಕೆ ನೀಡುತ್ತಿದ್ದಾರೆ. ಇನ್ನೂ ಅವರ ಆಡಳಿತ ಅವಧಿಯಲ್ಲಿ ಜನತೆಗಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಗ್ಯಾಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಿದರು.
ಇನ್ನೂ ಕೋವಿಡ್ ಸಂದರ್ಭದಲ್ಲಿ ನನ್ನ ಪ್ರಾಣವನ್ನು ಲೆಕ್ಕಿಸದೆ ಜನರ ಸೇವೆ ಮಾಡಿದ್ದೇನೆ. ಆದ್ರೇ, ಹೊರ್ತಿ ಅವರು ಯಾವುದೇ ಕೆಲಸ ಮಾಡಿಲ್ಲ. ನನ್ನ ವೈಯಕ್ತಿಕ ಜೀವನದಲ್ಲಿ ಹೊರ್ತಿ ಮೂಗು ತೋರಿಸಬಾರದು ಎಂದು ವಾಗ್ದಾಳಿ ನಡೆಸಿದರು. ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಅಭಿವೃದ್ಧಿ ಕೆಲಸಕ್ಕೆ ಅವಕಾಶ ನೀಡಿ ಎಂದರು.