ವಿಜಯಪುರ: 2023-24ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷ ಮತ್ತು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಡಿಪ್ಲೋಮಾ ಕೋರ್ಸ್ (ಡಿ.ಹೆಚ್.ಟಿ.ಟಿ) ಪ್ರವೇಶಕ್ಕಾಗಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ, ಉತ್ತಿರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ:01-07-2023ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿಬೇಕು. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಕೌನ್ಸಿಲಿಂಗ್ ಗಾಗಿ ಕರೆಯಲಾಗುತ್ತದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಅವರು ತಿಳಿಸಿದ್ದಾರೆ. ಅರ್ಜಿಗಳನ್ನು ಆನ್ ಲೈನ್ನಲ್ಲಿ https://khtigadag.ac.in/AdmissionForm.pdf ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನ. ಆಸಕ್ತರು, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ, ದೂರವಾಣಿ ಸಂಖ್ಯೆ 08372-297221 ಹಾಗೂ ಮೊಬೈಲ್ ಸಂಖ್ಯೆ 9448644074 ಹಾಗೂ ಸಹಾಯಕ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ,ಜಿಲ್ಲಾ ಪಂಚಾಯತಿ ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಮೊಬೈಲ್ ಸಂಖ್ಯೆ:9902561441 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.