ವಿಜಯಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ಪೆಂಟರ್, ಪ್ಲಂಬರ್ ಹಾಗೂ ಬಾರ ಬೆಂಡಿಂಗ್ ಟೂಲ್ ಕಿಟ್ಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತಿದ್ದು, ಅರ್ಹ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಕಾರ್ಮಿಕರು ದಿನಾಂಕ : 06-03-2023 ರಿಂದ 10-03-2023 ರೊಳಗಾಗಿ ಅರ್ಜಿಯನ್ನು ಕಾರ್ಮಿಕ ಅಧಿಕಾರಿಗಳ ಕಚೇರಿ, ವಿಜಯಪುರ ಉಪ ವಿಭಾಗ, ವಿಜಯಪುರ ಕಲ್ಯಾಣ ಸಮುದಾಯ ಭವನ ಸಿಂದಗಿ ನಾಕಾ, ಅಲ್ಲಾಪೂರ ಓಣಿ, ವಿಜಯಪುರ ಕಚೇರಿಗೆ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ, ಆಧಾರ ಕಾರ್ಡ, ಉದ್ಯೋಗ ಪ್ರಮಾಣ ಪತ್ರ, ಫಲಾನುಭವಿ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.