ವಿಜಯಪುರ: ರಾಜ್ಯ ಸರ್ಕಾರ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಮಾಧ್ಯಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಂದ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಆನಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. 2022-23 ನೇ ಸಾಲಿನಲ್ಲಿ ಮಾಧ್ಯಮಿಕ ಮತ್ತು ಪ್ರೌಢಶಾಲೆಯಲ್ಲಿ 6 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟು ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳು ಕಚೇರಿಯ ವೆಬ್ ಸೈಟ್ https://dyes-kreeda.Karnataka. ಮೂಲಕ ದಿನಾಂಕ : 31-07-2023ರೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08352-251085/9480886555 ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.