ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕಾನೂನು ಶಾಲೆಗೆ 2023-24ನೇ ಸಾಲಿಗೆ ಒಂದು ವರ್ಷದ ಅವಧಿಗೆ ಸಮಾಜಶಾಸ್ತ್ರ ವಿಷಯಕ್ಕೆ 1 (ಒಬ್ಬ) ಅತಿಥಿ ಉಪನ್ಯಾಸಕರ ಹುದ್ದೆ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ್ 18 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವೆಬ್ ಸೈಟ್ www.kslu.karnataka.gov.in ಭೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.