ವಿಜಯಪುರ: ಬೈಕ್ ಅಪಘಾತ ತಪ್ಪಿಸಲು ಹೋಗಿ ಕಾರು ರಸ್ತೆ ಪಕ್ಷದ ತಡೆಗೋಡೆ ಡಿಕ್ಕಿಯಾಗಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆಯ ಎದುರು ನಡೆದಿದೆ.
ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದ್ರೇ, ಕಾರು ಮಾತ್ರ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಅಲ್ಲದೇ, ರಸ್ತೆ ಮಧ್ಯದಲ್ಲಿ ರೋಡ್ ಬ್ರೇಕ್ಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.