ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ:ಜಿಲ್ಲಾಧಿಕಾರಿ ಡಾ.ಆನಂದ.ಕೆ

Karnataka 1 News
ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ:ಜಿಲ್ಲಾಧಿಕಾರಿ ಡಾ.ಆನಂದ.ಕೆ

ವಿಜಯಪುರ: ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬAಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಒಳಗೊಂಡAತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸುವಂತೆ ಅವರು ಸೂಚನೆ ನೀಡಿದರು.

ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಬAಧಿಸಿದ ಇಲಾಖೆಗಳು ನಿರಂತರ ಸಭೆ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸುವ ಮೂಲಕ ಸೂಕ್ತ ಕಾನೂನು ಅರಿವು ಮತ್ತು ತಿಳುವಳಿಕೆ ಮೂಡಿಸಬೇಕು. ಈ ವಿಷಯದಲ್ಲಿ ತುಂಬಾ ಗಂಭೀರತೆಯಿAದ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.

ಬಾಲ್ಯವಿವಾಹ ತಡೆಗಟ್ಟುವಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಆಡಳಿತಗಳ ಪಾತ್ರ ಬಹುಮುಖ್ಯವಾಗಿದ್ದು, ಸಮನ್ವಯವಾಗಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ನಡೆಯುವ ಮುನ್ನವೇ ಪತ್ತೆ ಹಚ್ಚಿ ತಪ್ಪಿತಸ್ಥರ ಸಂಬAಧಿಸಿದ ಪೋಷಕರು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರ ವಿರುದ್ದ ವಿಳಂಬ ಮಾಡದೇ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚಿಸಿದರು.

ಬಾಲ್ಯವಿವಾಹ ಅದೊಂದು ಅಪರಾಧ. ಸಾರ್ವಜನಿಕರಿಗೆ ಸೂಕ್ತ ಕಾನೂನಿನ ಅರಿವು ನೀಡುವುದ ಜೊತೆಗೆ ಬಾಲ್ಯವಿವಾಹ ನಡೆಯುವುದು ಕಂಡುಬAದಲ್ಲಿ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಮಕ್ಕಳ ಭವ್ಯ ಭವಿಷ್ಯ ಹಾಳಾಗದಂತೆ ಸಂಬAಧಿಸಿದ ಇಲಾಖಾ ಅಧಿಕಾರಿಗಳು ಮುಂಜಾಗ್ರತೆವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಫ್ ಕೇಂದ್ರಗಳಲ್ಲಿ ಪೋಕ್ಸೋ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕೊಳಗಾದವರನ್ನು ಕೌನ್ಸೆಲಿಂಗ್ ಪ್ರಕ್ರಿಯೆಗೆ ಒಳಪಡಿಸಿ, ಅವರ ಮನೋಸ್ಥೆöÊರ್ಯ ಹೆಚ್ಚಿಸಬೇಕು. ಈ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು.ವೈದ್ಯರು, ಪೊಲೀಸ್ ಇಲಾಖೆ ಸಹಕಾರ ಒದಗಿಸಬೇಕು. ಸಂಬAಧಿಸಿದ ಸಂತ್ರಸ್ತರ ಕುರಿತ ವಸ್ತುಸ್ಥಿತಿ ಆಗಾಗ ವರದಿ ಮಾಡಬೇಕು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಸಾರ್ವಜನಿಕರಿಗೆ ಜಾಗೃತಿ ಅವಶ್ಯವಾಗಿದ್ದು, ಈ ಬಗ್ಗೆ ನಿರಂತರ ಶಿಬಿರ, ಸಭೆ ನಡೆಸಬೇಕು. ಪ್ರಕರಣ ನಡೆದ ಸಂದರ್ಭದಲ್ಲಿ ಮಾಹಿತಿ ಒದಗಿಸಿದರೆ ಪೊಲೀಸ್ ಇಲಾಖೆಯಿಂದ ಈ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು. ಸಂಬAಧಿಸಿದ ಇಲಾಖೆಗಳು ವಾಟ್ಸಾಫ್ ಗ್ರೂಪ್ ರಚಿಸಿಕೊಂಡು ಸಮರ್ಪಕ ಮಾಹಿತಿಯನ್ನು ವಿನಿಮಯ ಮಾಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತçಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";