ಹಾವೇರಿ: ಜಿಲ್ಲಾ ಪೊಲೀಸರ ಭರ್ಜರಿ ಬೇಟೆ ಹಿನ್ನಲೆ ಒಂದು ಕೋಟಿ ಅಧಿಕ ನಗದು, ಕಾರು, ಏರ್ಗನ್ ವಶಕ್ಕೆ ಪಡೆದುಕೊಂಡು ನಾಲ್ವರು ಅಂತರ್ ರಾಜ್ಯ ದರೋಡೆಕೋರರ ಬಂಧಿಸಿದ್ದಾರೆ. ಒಂದು ಕೋಟಿಗೂ ಅಧಿಕ ಮೌಲ್ಯದ ನಗದು, ಐದು ಕಾರುಗಳು, ಒಂದು ಏರ್ ಗನ್, 6 ಮೊಬೈಲ್ ಫೋನ್ ಗಳು ಮತ್ತು 3 ಲ್ಯಾಪ್ ಟಾಪ್ ಗಳು ಸೇರಿದಂತೆ ಕೃತ್ಯಕ್ಕೆ ಬಳಸಿದ ವಸ್ತುಗಳ ಜಪ್ತಿಗೈದಿದ್ದಾರೆ. ಕೇರಳ ರಾಜ್ಯದ ಅಂತೋನಿ ಅಲಿಯಾಸ್ ಅಂಟಪ್ಪನ್(೨೨ ವರ್ಷ), ಅಬ್ಬಾಸ್ ಇ.ಎಸ್ ಪಿರಾಯಿರಿ(೩೮ ವರ್ಷ), ನಿಶಾದಬಾಬು ಅಲಿಯಾಸ್ ಬಾಬು.ಟಿ(೪೭ ವರ್ಷ) ಮತ್ತು ಭರತಕುಮಾರ ಅಲಿಯಾಸ್ ಕುಟ್ಟಾ(೨೯ ವರ್ಷ) ಬಂಧಿತ ಆರೋಪಿಗಳು.
ಹವಾಲಾ ಹಣ ಸಾಗಣೆ ಮಾಡುವ ಮತ್ತು ಬಂಗಾರವನ್ನು ಕಳ್ಳಸಾಗಣೆ ಮಾಡುವ ವ್ಯಾಪಾರಿಗಳನ್ನು ಗುರಿಯಾಗಿಟ್ಟುಕೊಂಡು ಗ್ಯಾಂಗ್ ಕೃತ್ಯ ಎಸುಗುತ್ತಿತ್ತು.
ಎಸ್ಪಿ ಹನುಮಂತರಾಯ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.