ವಿಜಯಪುರ: ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ. ರೋಹಿತ್ ಸುಭಾಶ ಪವಾರ (22) ಕೊಲೆಯಾದ ಯುವಕ. ರೋಹಿತನ್ನು
ಕೊಲೆಗೈದು ಮುಳ್ಳುಕಂಟಿಯಲ್ಲಿ ಶವ ಬಿಸಾಡಿ ಕೊಲೆಗಾರರು ಎಸ್ಕೇಪ್ ಆಗಿದ್ದಾರೆ. ಅಲ್ಲದೇ,
ಸ್ಥಳದಲ್ಲಿ ಬಿಯರ್ ಬಾಟಲ್ ಚಿಪ್ಸ್ ಪ್ಯಾಕೇಟ್ ಪತ್ತೆಯಾಗಿದೆ.
ಕುಡಿದ ಮತ್ತಿನಲ್ಲಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ
![](https://karnataka1news.com/wp-content/uploads/2024/02/Knife.jpg)