ವಿಜಯಪುರ: ಯುವಕನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ಝಂಡಾ ಕಟ್ಟಿ ಬಳಿ ನಡೆದಿದೆ. ಸಾಹಿಲ್ ಭಾಂಗಿ (21) ಹತ್ಯೆಯಾಗಿರುವ ದುರ್ದೈವಿ. ತಲೆಯ ಮೇಲೆ ಕಲ್ಲು ಎತ್ತು ಹಾಕಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಇನ್ನು ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/12/IMG_20231210_084852-1024x601.jpg)