K1N ಡೆಸ್ಕ್: ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿ ನಿರ್ದೇಶನದಲ್ಲಿ ತೆರೆಕಂಡ RRR ಚಿತ್ರದ ಗೀತೆ(Song) ‘ನಾಟು ನಾಟು’ಗೆ ಗೋಲ್ಡನ್ ಗ್ಲೋಬ್ನಲ್ಲಿ ಅತ್ಯುತ್ತಮ ಸಂಗೀತ ಪ್ರಶಸ್ತಿ ಬಾಚಿಕೊಂಡಿದೆ. ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ತೆಲುಗು ಬ್ಲಾಕ್ ಬಸ್ಟರ್ ಆರ್ ಆರ್ ಆರ್ ಚಿತ್ರವು ಅತ್ಯುತ್ತಮ ಇಂಗ್ಲೀಷೇತರ ಚಿತ್ರ ಎಂದು ನಾಮನಿರ್ದೇಶನಗೊಂಡಿದೆ. ಚಿತ್ರದಲ್ಲಿ “ನಾಟು ನಾಟು” ನ್ನು ಹಿರಿಯ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಯೋಜಿಸಿದರು. ಸಮಾರಂಭದಲ್ಲಿ ಸಂಗೀತ ನಿರ್ದೇಶಕ ಕೀರವಾಣಿ ಟ್ರೋಫಿಯನ್ನು ಸ್ವೀಕರಿಸಿ ಸಂಭ್ರಮಿಸಿದರು.