ವಿಜಯಪುರ: ರಾಜ್ಯ, ಕೇಂದ್ರ ಸರ್ಕಾರದ ಅಭಿವೃದ್ಧಿ ಹಿನ್ನಲೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭರ್ಜರಿ ಗೆಲವು ಸಿಕ್ಕಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ್ ಕೂಚಬಾಳ್ ಹೇಳಿದರು.
ವಿಜಯಪುರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಶಾಸಕ ಯತ್ನಾಳ್ ಅಭಿವೃದ್ಧಿ ಕೆಲಸಗಳು ಕೂಡ ಗೆಲುವಿಗೆ ಕಾರಣ ಆಗಿದೆ. ಇದು ಮತದಾರರ ಆಶೀರ್ವಾದ ಆಗಿದೆ. ಇನ್ನು ಮತದಾರರ ಒಲವು ಬಿಜೆಪಿ ಪರವಾಗಿ ಇದೆ. ಪಕ್ಷದ ಗೆಲುವಿಗೆ ಕಾರ್ಯಕರ್ತರು ಸೇವೆ ಸಲ್ಲಿಸಿದ್ದಾರೆ. ಅದಕ್ಕಾಗಿ ಮತದಾರರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.